ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ

ಕರ್ನಾಟಕ ಸರ್ಕಾರ

Back
ಸ್ವಯಂ ಉದ್ಯೋಗ ಯೋಜನೆ

ಸ್ವಯಂ ಉದ್ಯೋಗ ಯೋಜನೆ

 

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದುವುಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಕೃತ/ಷೆಡ್ಯೂಲ್ಡ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಓದಗಿಸಲಾಗುವುದು. ಘಟಕ ವೆಚ್ಚದ ಶೇ.33 ಅಥವಾ ಗರಿಷ್ಟ ಮಿತಿ ರೂ.1.00 ಲಕ್ಷದ ಸಹಾಯಧನ ನೀಡಲಾಗುವುದು.


ಅರ್ಹತೆಗಳು:


(ಅ) ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
(ಆ) ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
(ಇ) ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
(ಈ)ಎಲ್ಲಾ ಮೂಲಗಳಿಂದ ಕೌಟುಂಬಿಕ ಆದಾಯ ರೂ.6.00 ಲಕ್ಷ ಮೀರಬಾರದು. 
(ಉ)ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ/ಸಾರ್ವಜನಿಕ ವಲಯದ ಘಟಕ ಸರ್ಕಾರದ ಉದ್ಯೋಗಿಯಾಗಿರಬಾರದು
(ಊ) ಅರ್ಜಿದಾರರು ಕೆ ಎಂ ಡಿ ಸಿ ಯಲ್ಲಿ ಈಗಾಗಲೇ ಸಾಲ ಪಡೆದಿರಬಾರದು.

ದಾಖಲೆಗಳು:


1.ಆನ್‍ಲೈನ್ ಅರ್ಜಿ
2.ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
3.ಜಾತಿ, ಆದಾಯ ಪ್ರಮಾಣ ಪತ್ರ
4.ಆಧಾರ್ ಕಾರ್ಡ್ ಪ್ರತಿ
5.ಯೋಜನಾ ವರದಿ

ಆಯ್ಕೆ ಸಮಿತಿ:


1.ಆಯಾ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರು - ಅಧ್ಯಕ್ಷರು
2.ತಾಲ್ಲೂಕಿನಲ್ಲಿ ಖಾಯಂ ಆಗಿ ವಾಸಿಸುತ್ತಿರುವ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು - ಸಹ ಅಧ್ಯಕ್ಷರು
3.ಸಬಂಧಿಸಿದ ತಾಲ್ಲೂಕು ತಹಶೀಲ್ದಾರರು - ಸದಸ್ಯರು
4.ಕಾರ್ಯನಿರ್ವಾಹಣಾಧಿಕಾರಿ ತಾಲ್ಲೂಕು ಪಂಚಾಯತ್-ಸದಸ್ಯರು
5.ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ -ಸದಸ್ಯರು
6.ಜಿಲ್ಲಾ ಜಂಟಿ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ-ಸದಸ್ಯರು
7.ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಸದಸ್ಯರು
8.ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ- ಸದಸ್ಯ ಕಾರ್ಯದರ್ಶಿ

×
ABOUT DULT ORGANISATIONAL STRUCTURE PROJECTS