ನಿಗಮದ ಬಗ್ಗೆ

“ಬಡತನದಿಂದ ಸ್ವಾವಲಂಬನೆ ಕಡೆಗೆ”

ನಿಗಮದ ಸ್ಥಾಪನೆ

 

            ಕರ್ನಾಟಕ ರಾಜ್ಯದ ಮತೀಯ ಅಲ್ಪಸಂಖ್ಯಾತರ ಜನಸಂಖ್ಯೆಯು 2011ರ ಜನಗಣತಿ ಪ್ರಕಾರ ಸುಮಾರು 96,00,475 ಇದ್ದು, ಈ ಪ್ರಮಾಣವು ರಾಜ್ಯದ ಒಟ್ಟು ಜನಸಂಖ್ಯೆಯ ಶೇ.15.92 ಆಗಿರುತ್ತದೆ. ರಾಜ್ಯದಲ್ಲಿ ವಾಸಿಸುತ್ತಿರುವ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರು ಮತೀಯ ಅಲ್ಪಸಂಖ್ಯಾತರ ವ್ಯಾಪ್ತಿಗೆ ಸೇರಿರುತ್ತಾರೆ.  ಇವರಲ್ಲಿ ಬಹುಪಾಲು ಜನರು ಬಡತನದ ರೇಖೆಯ ಕೆಳಗೆ ಸುತ್ತುತ್ತಿದ್ದು, ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯು ಚಿಂತಾಜನಕವಾಗಿದ್ದು, ಅವರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯವನ್ನು ಸರ್ಕಾರವು ಮೊದಲು ಸ್ಥಾಪಿಸಿದ್ದ ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ (ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಎಂದು ಪುನರ್‍ನಾಮಕರಣಗೊಂಡಿದೆ) ವಹಿಸಲಾಗಿತ್ತು.

 

            ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಿಗೆ ಸಾಲಸೌಲಭ್ಯವನ್ನು ಒದಗಿಸುತ್ತಿತ್ತು.  ಹೀಗಿದ್ದರೂ, ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿದ್ದ ಯೋಜನೆಗಳು ಮತೀಯ ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಪರಿಣಾಮವನ್ನು ಬೀರುತ್ತಿಲ್ಲ ಎಂಬ ಅಂಶವನ್ನು ಗಮನಿಸಿ, ಮತ್ತು ರಾಜ್ಯದ ಅಲ್ಪಸಂಖ್ಯಾತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಉತ್ತಮಪಡಿಸುವ ಸಲುವಾಗಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಏಕೈಕ ಉದ್ದೇಶದಿಂದ ಆಗಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ರಾಮಕೃಷ್ಣ ಹೆಗ್ಡೆಯವರ ನೇತೃತ್ವದ ಸರ್ಕಾರವು ದಿನಾಂಕ 07.02.1986ರಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಎಂಬ ಪ್ರತ್ಯೇಕ ನಿಗಮವನ್ನು ಸ್ಥಾಪಿಸಿತು.

 

ನಿಗಮದ ಉದ್ದೇಶ

 

            ರಾಜ್ಯದ ಮತೀಯ ಅಲ್ಪಸಂಖ್ಯಾತ ಸಮುದಾಯಗಳ ಕಡುಬಡವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಮತ್ತು ಅವರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವುದು ಹಾಗೂ ಅವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವುದು ನಿಗಮದ ಮುಖ್ಯ ಉದ್ದೇಶವಾಗಿದೆ.

 

ನಿಗಮದ ರಚನೆ:

            ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯ ಸರ್ಕಾರ ಸ್ವಾಮ್ಯದ ಉದ್ಯಮವಾಗಿದ್ದು, 1956ರ ಕಂಪೆನಿ ಕಾಯಿದಯನ್ವಯ ಸ್ಥಾಪಿಸಲ್ಪಟ್ಟಿದೆ.ನಿಗಮದ ಅಧಿಕೃತ ಬಂಡವಾಳವು ರೂ.150.00 ಕೋಟಿ ಇರುತ್ತದೆ.ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೇಲ್ವಿಚಾರಣೆಯಲ್ಲಿ ನಿಗಮವು ಕಾರ್ಯನಿರ್ವಹಿಸುತ್ತಿದೆ.ನಿಗಮದ ನೋಂದಾಯಿತ ಕಛೇರಿ ಬೆಂಗಳೂರಿನಲ್ಲಿ ಇದ್ದು, ಇದರ ಜಿಲ್ಲಾ ಕಛೇರಿಗಳು ರಾಜ್ಯದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಇರುತ್ತವೆ.ನಿಗಮದ ನಿರ್ದೇಶಕರ ಮಂಡಳಿಯ ಅಧ್ಯಕ್ಷರು ಕಾರ್ಯಕಾರಿ ಮುಖ್ಯಸ್ಥರಾಗಿದ್ದುವ್ಯವಸ್ಥಾಪಕ ನಿರ್ದೇಶಕರು, ಆಡಳಿತಾತ್ಮಕ ಮುಖ್ಯಸ್ಥರಾಗಿರುತ್ತಾರೆ.ಸರ್ಕಾರಪ್ರ್ರಾಯೋಜಿತ ಯೋಜನೆಗಳನ್ನು ನಿಗಮದ ಜಿಲ್ಲಾ ಕಛೇರಿಗಳ ಮೂಲಕ ಅನುಷ್ಠಾನಗೊಳಿಸಿ ಮತೀಯ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವುದು ನಿಗಮದ ಧ್ಯೇಯೋದ್ದೇಶವಾಗಿದೆ.

 

 

 

 

.


ಇತ್ತೀಚಿನ ನವೀಕರಣ​ : 05-11-2020 02:26 PM
ಅನುಮೋದಕರು: Karnataka Minorities Development Corporation

ಹಕ್ಕುತ್ಯಾಗ :

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

  • ನಮ್ಮ ಬಗ್ಗೆ
  • ಜಾಲನಕ್ಷೆ
  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಮಾರ್ಗಸೂಚಿಗಳು
  • ಆವೃತ್ತಿ : CeG/KRN 2.0
  • ಸಂದರ್ಶಕರು : 32131
  • ಇತ್ತೀಚಿನ ನವೀಕರಣ : 06-04-2021 03:55 PM
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ - ವೆಬ್ ಪೋರ್ಟಲ್, ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ