ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಗಂಗಾ ಕಲ್ಯಾಣ ಯೋಜನೆ

'ಗಂಗಾ ಕಲ್ಯಾಣ' ಯೋಜನೆ

ಅ) ಏತ ನೀರಾವರಿ ಯೋಜನೆ

 

          ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್‌ಲೈನ್ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಙರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು.  ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.  ಅರ್ಜಿದಾರರು ವೆಬ್‌ ಪೇಜ್‌ ಮೂಲಕ ಆನ್-ಲೈನ್‌ ಅರ್ಜಿಯನ್ನು ಸಲ್ಲಿಸಬೇಕು.

 

ಆ) ವೈಯಕ್ತಿಕ ಕೊಳವೆಬಾವಿ ಯೋಜನೆ

 

ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನುಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್‌ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ. ಅರ್ಜಿದಾರರು ವೆಬ್ ಪೇಜ್‌ ಮೂಲಕ ಆನ್-ಲೈನ್‌ ಅರ್ಜಿಯನ್ನು ಸಲ್ಲಿಸಬೇಕು.

 

ಇ) ತೆರೆದ ಬಾವಿ

 

ವೈಯಕ್ತಿಕ ಕೊಳವೆಬಾವಿ ಕೊರೆಯಲು ಸಾಧ್ಯವಾಗದ ಸಂದರ್ಭದಲ್ಲಿ ಅಂದರೆ ಮಳೆ ಅಡ್ಡಿ ಪಡಿಸುವಿಕೆ, ಜಮೀನಿನಲ್ಲಿ ನಿಂತಿರುವ ಬೆಳೆಗಳು ಮುಂತಾದ ಸಂದರ್ಭಗಳಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ತೆರದ ಬಾವಿ ಕಾಮಗಾರಿಕೆಯನ್ನು ಜಿಲ್ಲಾ ವ್ಯವಸ್ಥಾಪಕರು ಫಲಾಪೇಕ್ಷಿಯ ಅಪೇಕ್ಷೆ ಮೇರೆಗೆ ನಿಗಮದ ನಿಯಮಾನುಸಾರ ಅರ್ಜಿ ಹಾಗೂ ದಾಖಲಾತಿಗಳನ್ನು ಪಡೆದು ಸಂಬಂಧಪಟ್ಟ ಮತ ಕ್ಷೇತ್ರದ ಮಾನ್ಯ ಶಾಸಕರ ಅನುಮೋದನೆ ಪಡೆದು ಪ್ರಸ್ತಾವನೆಯನ್ನು ಕೇಂದ್ರ ಕಛೇರಿಗೆ ಸಲ್ಲಿಸುವರು.

         

ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.2.00ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಈ ಮೊತ್ತದಲ್ಲಿ ಕೊಳವೆ ಬಾವಿಯ ಕೊರೆಯುವಿಕೆ, ಪಂಪ್‍ಸೆಟ್ಸ್ ಸರಬರಾಜು ಮತ್ತು ವಿದ್ಯುದ್ದೀಕರಣದ ಠೇವಣಿ ಮೊತ್ತವನ್ನು ಭರಿಸಲಾಗುತ್ತದೆ.  ಈ ಯೋಜನೆ ಅಡಿಯಲ್ಲಿ ರೂ.2,00,000/-ಗಳು ಸಹಾಯಧನ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗೆ ಸಹಾಯಧನ ರೂ.3.50 ಲಕ್ಷಗಳು ವಾಗಿರುತ್ತದೆ. ಇದರಲ್ಲಿ ರೂ. 50,000/- ವಿದ್ಯದೀಕರಣ ವೆಚ್ಚಕ್ಕೆ ಮೀಸಲು.

 

ಈ ಸೌಲಭ್ಯ ಪಡೆಯಬಯಸುವ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಅಂದರೆ ಪ್ರತಿ ಫಲಾನುಭವಿಗೆ 1ಎಕರೆ 20ಗುಂಟೆ (1 ಎಕರೆ50ಸೆಂಟ್ಸ್) ಎಕರೆಯಿಂದು 5 ಎಕರೆಯವರೆಗೆ ಕುಷ್ಕಿ ಜಮೀನಿರಬೇಕು ಮತ್ತು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು. ಸರ್ಕಾರಿ ಆದೇಶ ಸಂಖ್ಯೆ: ಸಕಇ 168 ಬಿಎಮ್‌ಎಸ್ 2010 ದಿನಾಂಕ 25-07-2011 ರಲ್ಲಿ ಸೂಚಿಸಿರುವಂತೆ ಮಡಿಕೇರಿ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಗರಿಷ್ಠ 1 ಎಕರೆ ಜಮೀನನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳಿಂದ ಸ್ವಯಂ ಲಿಖಿತ ಅರ್ಜಿ 3 ಭಾವಚಿತ್ರ, ವಾರ್ಷಿಕ ಆದಾಯ ಪ್ರಮಾಣ ಪತ್ರ, ಆಧಾರಕಾರ್ಡ್/ಚುನಾವಣ ಗುರುತಿನ ಚೀಟಿ/ರೇಷನ್ ಕಾರ್ಡ್ ನಕಲು, ಪಹಣಿ, ರೆರ್ಕಾರ್ಡ್ ಆಪ್ ರೈಟ್ಸ್ ಪಡೆದು ಆಯ್ಕೆ ಸಮಿತಿಯಲ್ಲಿ ಮಂಡಿಸಿ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಫಲಪೇಕ್ಷಿಗಳನ್ನು ಆಯ್ಕೆ ಮಾಡತಕ್ಕದ್ದು. (ಕೇಂದ್ರ ಕಛೇರಿಯ ಲಿಖಿತ ಅನುಮತಿ ಇಲ್ಲದೆ ಗುರಿಗಿಂತ ಹೆಚ್ಚಿಗೆ ಫಲಾಪೇಕ್ಷಿಗಳನ್ನು ಆಯ್ಕೆ ಮಾಡಿ ಪಟ್ಟಿ ಕಳುಹಿಸಿದರೆ ತಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು).

 

ಅರ್ಹತೆ:

 

 1. ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
 2. ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
 3. ಅವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
 4. ವಾರ್ಷಿಕ ಕೌಟುಂಬಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.81,000/ಗಳು ಹಾಗೂ ನಗರ ಪ್ರದೇಶಗಳಲ್ಲಿ ರೂ.1.03 ಲಕ್ಷಗಳನ್ನು ಮೀರಿಬಾರದು.
 5. ಅರ್ಜಿದಾರರು ʼಆಧಾರ್‌ʼ ಕಾರ್ಡ್‌, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿಯನ್ನು ಹೊಂದಿರಬೇಕು
 6. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು

 

 

 

 

 

.

ಇತ್ತೀಚಿನ ನವೀಕರಣ​ : 16-08-2021 12:02 PM ಅನುಮೋದಕರು: Karnataka Minorities Development Corporationಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ